
ಪ್ರಜಾವಾಣಿ ವಾರ್ತೆ
ಬೆಂಗಳೂರು: ಚರಸ್ ಹಾಗೂ ಗಾಂಜಾ ಮಾರುತ್ತಿದ್ದ ಮೂವರು ಆರೋಪಿಗಳನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಮಹಮದ್ ಸಲೀಂ (26), ಮೈಸೂರಿನ ಸೈಯದ್ ತಂಜೀಂ (32) ಹಾಗೂ ಮಹಮದ್ ಶಿಬಾನ್ (21) ಬಂಧಿತರು.
ಜೆ.ಪಿ.ಪಾರ್ಕ್ ಆಟದ ಮೈದಾನದಲ್ಲಿ ಆರೋಪಿಗಳು ಕಾರಿನಲ್ಲಿ ಮಾದಕ ವಸ್ತುಗಳನ್ನು ಮಾರುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, 2 ಕೆ.ಜಿ ಚರಸ್, 100 ಗ್ರಾಂ ಗಾಂಜಾ ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಊಟಿಯ ರೆಹಮಾನ್ ಎಂಬುವನಿಂದ ಕಡಿಮೆ ಬೆಲೆಗೆ ಗಾಂಜಾ, ಚರಸ್ ತಂದು ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.