ADVERTISEMENT

ಗಾಂಧಿಬಜಾರ್‌: ಮಾರುಕಟ್ಟೆ ನವೀಕರಣಕ್ಕೆ ಸಮಿತಿ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2018, 20:00 IST
Last Updated 18 ನವೆಂಬರ್ 2018, 20:00 IST

ಬೆಂಗಳೂರು: ಗಾಂಧಿ ಬಜಾರ್‌ ಮರು ನಿರ್ಮಾಣ ಹಾಗೂ ಮಾರುಕಟ್ಟೆ ನಿರ್ವಹಣೆಯ ಉದ್ದೇಶದಿಂದ ರಸ್ತೆ ಬದಿ ವ್ಯಾಪಾರಿಗಳನ್ನು ಒಳಗೊಂಡಂತೆ ಶುಕ್ರವಾರ ಸಮಿತಿಯೊಂದನ್ನು ರಚಿಸಲಾಗಿದೆ.

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನಲ್ಲಿ ನಡೆದ ಸಭೆಯಲ್ಲಿ ರಾಜ್ಯಸಭಾ ಸದಸ್ಯ ರಾಜೀವ್‌ ಗೌಡ, ಶಾಸಕ ಉದಯ್‌ ಗರುಡಾಚಾರ್‌ ಹಾಗೂ ಗಾಂಧಿ ಬಜಾರ್‌ನ ರಸ್ತೆ ಬದಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಸೇರಿ ಸಮಿತಿ ರಚಿಸುವ ತೀರ್ಮಾನಕ್ಕೆ ಬಂದಿದ್ದಾರೆ.

ಉದಯ್‌ ಗರುಡಾಚಾರ್‌ ಮಾತನಾಡಿ, ‘ಗಾಂಧಿ ಬಜಾರ್‌ ಅತ್ಯುತ್ತಮ ಮಾರುಕಟ್ಟೆಯಾಗಿ ಬೆಳೆಯಬೇಕು. ಇಲ್ಲಿ ಇರುವ ಸಮಸ್ಯೆಗಳು ಪರಿಹಾರವಾಗಬೇಕು. ಪಾದಾಚಾರಿಗಳಿಗೆ ಹಾಗೂ ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆಯಾಗದಂತೆ ಮರು ನಿರ್ಮಾಣ ಮಾಡುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.