ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಇಂದು ಬೆಳಿಗ್ಗೆ ನಗರದ ಎಂ. ಜಿ. ರಸ್ತೆಯಲ್ಲಿರುವ ಮಹಾತ್ಮ ಗಾಂಧೀಜಿ ಉದ್ಯಾನವನದಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪನಮನ ಸಲ್ಲಿಕೆ ಹಾಗೂ ಸರ್ವಧರ್ಮ ಪ್ರಾರ್ಥನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಅಭಿವೃದ್ಧಿ ಹೆಚ್ಚುವರಿ ಆಯುಕ್ತ ದಲ್ಜಿತ್ ಕುಮಾರ್, ಮಾಜಿ ಮಹಾಪೌರರುಗಳಾದ ಜಿ.ಹುಚ್ಚಪ್ಪ, ಎಂ.ರಾಮಚಂದ್ರಪ್ಪ, ಜಂಟಿ ಆಯುಕ್ತ ರಂಗನಾಥ್ ಅವರು ಮಹಾತ್ಮ ಗಾಂಧೀಜಿ ಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ವಿವಿಧ ಧಾರ್ಮಿಕ ಮುಖಂಡರಿಂದ ಸರ್ವಧರ್ಮ ಪ್ರಾರ್ಥನೆ ವಾಚನ ಜರುಗಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.