ADVERTISEMENT

ಕಾಂಗ್ರೆಸ್‌, ಜೆಡಿಎಸ್‌ನಿಂದ ಗಾಂಧಿ ಜಯಂತಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2025, 16:19 IST
Last Updated 2 ಅಕ್ಟೋಬರ್ 2025, 16:19 IST
<div class="paragraphs"><p>ಜೆಡಿಎಸ್‌, ಕಾಂಗ್ರೆಸ್‌</p></div>

ಜೆಡಿಎಸ್‌, ಕಾಂಗ್ರೆಸ್‌

   

ಬೆಂಗಳೂರು: ‘ಗಾಂಧೀಜಿ ಸಿದ್ಧಾಂತ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧೀಜಿ ಪ್ರತಿಮೆ ಮುಂದೆಯೇ ನಿಲ್ಲಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ADVERTISEMENT

‘ಮಹಾತ್ಮ ಗಾಂಧಿ ಅವರ ಸ್ವರೂಪ ಭಾರತಕ್ಕೆ ದೀಪವಾಗಿದೆ. ಗಾಂಧಿ ಜ್ಯೋತಿ ಕಾರ್ಯಕ್ರಮವನ್ನು ಸದ್ಯದಲ್ಲೇ ಆರಂಭಿಸಲಾಗುವುದು. 224 ವಿಧಾನಸಭಾ ಕ್ಷೇತ್ರಗಳಲ್ಲಿ ಜ್ಯೋತಿ ಸಂಚರಿಸಲಿದ್ದು, ಕಾಂಗ್ರೆಸ್ ಸಂಸ್ಥಾಪನಾ ದಿನದ ವೇಳೆಗೆ ಅದು ಮತ್ತೆ ನಮ್ಮ ಬಳಿಗೆ ಮರಳಲಿದೆ. ಎರಡು ತಿಂಗಳ ಅವಧಿಯಲ್ಲಿ ಈ ಕಾರ್ಯಕ್ರಮ ಮುಗಿಯಬೇಕು’ ಎಂದರು.

‘ಮಾಜಿ ‍ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ದೇಶಕ್ಕೆ ಮಾದರಿ. ಅವರು ಅಧಿಕಾರಕ್ಕೆ ಅಂಟಿಕೊಂಡವರಲ್ಲ’ ಎಂದು ಸ್ಮರಿಸಿದರು.

ಜೆಡಿಎಸ್‌: ಜೆಡಿಎಸ್‌ ಕಚೇರಿಯಲ್ಲಿ ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

‘ಮಹಾತ್ಮ ಗಾಂಧಿ ಅವರು ಸದಾ ನಮಗೆ ಸ್ಫೂರ್ತಿ, ಅರಿವು, ಸನ್ಮಾರ್ಗ ತೋರುವ ದಿವ್ಯ ಚೇತನ’ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಹೇಳಿದರು.

ದೇಶದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳತೆ, ಸಜ್ಜನಿಕೆ, ದಕ್ಷತೆ ಹಾಗೂ ಪ್ರಾಮಾಣಿಕತೆಯ ಮೇರು ನಾಯಕರಾಗಿದ್ದರು ಎಂದು ಸ್ಮರಿಸಿದರು. ಜೆಡಿಎಸ್‌ ಪಕ್ಷದ ನಾಯಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.