
ಬೆಂಗಳೂರು: ‘ಮೊದಲು ನಮ್ಮನ್ನು ಅರ್ಥ ಮಾಡಿಕೊಂಡರೆ ಮಾತ್ರ ಗಾಂಧೀಜಿ ವರನ್ನು ಅರಿಯಲು ಸಾಧ್ಯ. ಇದರೊಂದಿಗೆ ಸಮಾಜವನ್ನು ಅರ್ಥ ಮಾಡಿಕೊಳ್ಳಬಹುದು ಎಂದು ದೈಹಿಕ ಶಿಕ್ಷಣ ನಿರ್ದೇಶಕಿ ಅಬಿದಾ ಬೇಗಂ ಅಭಿಪ್ರಾಯಪಟ್ಟರು.
ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ-1 ರ ವತಿಯಿಂದ ಸೋಮವಾರ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಗಾಂಧಿ ಮತ್ತು ಯುವಜನತೆ ಕುರಿತು ಮಾತನಾಡಿದರು.
‘ವಾಸ್ತವವನ್ನು ಅರ್ಥ ಮಾಡಿಕೊಂಡು ಸರಳ ಜೀವನವನ್ನು ಮೈಗೂಡಿಸಿಕೊಂಡಾಗ ಸೇವಾ ಮನೋಭಾವ ಮೂಡುತ್ತದೆ. ಗಾಂಧೀಜಿ ಅವರ ಕಲ್ಪನೆಯ ಕೂಸು ರಾಷ್ಟ್ರೀಯ ಸೇವಾ ಯೋಜನೆ. ಯುವ ಜನರು ಗ್ರಾಮಗಳ ಕಡೆ ತೆರಳಬೇಕು’ ಎಂದರು. ವಾಣಿಜ್ಯಶಾಸ್ತ್ರ ವಿಭಾಗದ ಅಧ್ಯಾಪಕ ಸತೀಶ್ ಅವರು ‘ರಾಷ್ಟ್ರೀಯ ಸೇವಾ ಯೋಜನೆ ಕುರಿತು ಮಾತನಾಡಿದರು. ಪ್ರಾಂಶುಪಾಲೆ ಡಾ. ಶುಭ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಎಸ್.ಜಿ. ರಾಘವೇಂದ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.