ADVERTISEMENT

ಭಾರತೀಯರ ಮನಸ್ಸಿನಲ್ಲಿ ಗಾಂಧೀಜಿ ಶಾಶ್ವತ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಜಯಂತಿ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2025, 15:30 IST
Last Updated 2 ಅಕ್ಟೋಬರ್ 2025, 15:30 IST
ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು
ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು   

ಪ್ರಜಾವಾಣಿ ವಾರ್ತೆ

ಬೆಂಗಳೂರು: ಅಹಿಂಸಾ ಮಾರ್ಗದಲ್ಲಿ ನಡೆದು ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಅವರ ಹೆಸರು ಭಾರತೀಯರ ಮನಸ್ಸಿನಲ್ಲಿ ಶಾಶ್ವತವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ADVERTISEMENT

ಗ್ರಾಮ ನೈರ್ಮಲ್ಯ, ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್, ರಸ್ತೆಗಳು ಸೇರಿದಂತೆ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿ ಗ್ರಾಮ ಸ್ವರಾಜ್ಯ ನಿರ್ಮಿಸಬೇಕು ಎಂಬುದು ಗಾಂಧೀಜಿಯವರ ಕನಸಾಗಿತ್ತು. ಸಮಾಜದ ದುರ್ಬಲವರ್ಗದವರಿಗೆ ಶಕ್ತಿ ತುಂಬಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂಬುದು ಗಾಂಧೀಜಿಯವರ ತತ್ವವಾಗಿತ್ತು ಎಂದು ಹೇಳಿದರು.

‘ದೇಶ ಕಂಡ ಸರಳ, ಸಜ್ಜನ, ಸಮರ್ಪಣೆಗೆ ಹೆಸರಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು.
ಜೈ ಜವಾನ್ – ಜೈ ಕಿಸಾನ್ ಎಂಬ ಘೋಷವಾಕ್ಯವನ್ನು ದೇಶಕ್ಕೆ ನೀಡಿ, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯ ಅಗತ್ವವನ್ನು ಸಾರಿದ್ದರು’ ಎಂದರು.

‘ಹೊಸ ಪೀಳಿಗೆಯು ಮಹಾತ್ಮರ ಬಗ್ಗೆ ಓದದೆ, ತಿಳಿದುಕೊಳ್ಳದೆ, ಅವರ ಮೌಲ್ಯಗಳನ್ನು ವಿರೋಧಿಸುವ ಪ್ರವೃತ್ತಿ ಬೆಳೆಸಿಕೊಳ್ಳುತ್ತಿರುವುದು ವಿಷಾದನೀಯ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.