ADVERTISEMENT

ಗಣೇಶ ಮೂರ್ತಿ ಭಗ್ನ

​ಪ್ರಜಾವಾಣಿ ವಾರ್ತೆ
Published 30 ಮೇ 2023, 4:40 IST
Last Updated 30 ಮೇ 2023, 4:40 IST
ಗಣೇಶ ಮೂರ್ತಿಯನ್ನು ಸುತ್ತಿಗೆಯಿಂದ ಹೊಡೆದು ಭಗ್ನಗೊಳಿಸಿರುವ ದುಷ್ಕರ್ಮಿಗಳು
ಗಣೇಶ ಮೂರ್ತಿಯನ್ನು ಸುತ್ತಿಗೆಯಿಂದ ಹೊಡೆದು ಭಗ್ನಗೊಳಿಸಿರುವ ದುಷ್ಕರ್ಮಿಗಳು   

ಕೆ.ಆರ್.ಪುರ: ಮಹದೇವಪುರ ಕ್ಷೇತ್ರದ ಗುಂಜೂರು ಹೊಸಹಳ್ಳಿ ಮುಖ್ಯ ರಸ್ತೆಯ ಗಣೇಶ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಕಲ್ಲಿನ ಗಣೇಶ ಮೂರ್ತಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ.

ಭಾನುವಾರ ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿನಲ್ಲಿ ಕಾರಿನಿಂದ ಇಳಿದ ಇಬ್ಬರು ದುಷ್ಕರ್ಮಿಗಳು ಗಣೇಶ ವಿಗ್ರಹಕ್ಕೆ ಹಾನಿ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ದೃಶ್ಯಾವಳಿಗಳು ದೇವಾಲಯ ಮುಂದೆ ಇರುವ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗ್ರಾಮಸ್ಥರು ವರ್ತೂರು ಪೋಲಿಸ್ ಠಾಣೆಗೆ ದೂರು ದಾಖಲಿಸಿ ಕೂಡಲೇ ಶಾಂತಿ ಕದಡುವ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ಜರಗಿಸಬೇಕೆಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.