ಬೆಂಗಳೂರು: ಶಾಸಕಿ ಸೌಮ್ಯಾ ರೆಡ್ಡಿ ಅವರು ಸಾರ್ವಜನಿಕರಿಗೆ ಗುರುವಾರ ಮೂರು ಸಾವಿರಕ್ಕೂ ಹೆಚ್ಚು ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಿಸಿದರು.
ಜಯನಗರದ ವಿಶ್ವೇಶ್ವರಯ್ಯ ಸಂಕೀರ್ಣದಲ್ಲಿ ಜಯನಗರ ಬಾಂಧವ ಸಂಸ್ಥೆಯ ಮೂಲಕ ಗೌರಿಗಣೇಶ ಮೂರ್ತಿಗಳನ್ನು ವಿತರಿಸಲಾಯಿತು. ಜೇಡಿಮಣ್ಣಿನಿಂದ ಮಾಡಿರುವ ಈ ಮೂರ್ತಿಗಳಲ್ಲಿ ಸಸಿಗಳ ಬೀಜಗಳನ್ನು ಹಾಕಲಾಗಿದೆ.
‘ನಗರದಲ್ಲಿ ಎಲ್ಲರೂ ಪರಿಸರಸ್ನೇಹಿ ಹಬ್ಬ ಆಚರಿಸಬೇಕೆಂಬುದು ನಮ್ಮ ಸಂಸ್ಥೆಯ ಉದ್ದೇಶ. ಅದಕ್ಕಾಗಿ ಪರಿಸರಸ್ನೇಹಿ ಮೂರ್ತಿಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎನ್. ನಾಗರಾಜ್ ಹೇಳಿದರು.
ಸೌಮ್ಯಾ ರೆಡ್ಡಿ, ‘ಪಿಒಪಿ ಮೂರ್ತಿಗಳನ್ನು ಕೆರೆಗಳಲ್ಲಿ ವಿಸರ್ಜನೆ ಮಾಡಿದಾಗ ಅವು ನೀರಿನಲ್ಲಿ ಸಂಪೂರ್ಣವಾಗಿ ಕರಗುವುದಿಲ್ಲ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮವಾಗುತ್ತದೆ. ಆದರೆ, ಜೇಡಿಮಣ್ಣಿನಿಂದ ತಯಾರಿಸಿದ ಮೂರ್ತಿಗಳು ಸುಲಭವಾಗಿ ಕರಗುವುದಲ್ಲದೆ, ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ’ ಎಂದರು.
ಶಾಸಕ ರಾಮಲಿಂಗಾರೆಡ್ಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.