ADVERTISEMENT

ಗಣೇಶ ಮೂರ್ತಿ ಮೆರವಣಿಗೆ: ಹಲವೆಡೆ ಮದ್ಯ ಮಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 21:15 IST
Last Updated 2 ಸೆಪ್ಟೆಂಬರ್ 2022, 21:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆ ಕೈಗೊಂಡಿರುವ ಪೊಲೀಸರು, ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದಾರೆ.

ಈ ಬಗ್ಗೆ ಆದೇಶ ಹೊರಡಿಸಿರುವ ಪೊಲೀಸ್ ಕಮಿಷನರ್, ‘ನಗರದ ಹಲವು ಪ್ರದೇಶಗಳಲ್ಲಿ ಸೆ. 4ರಂದು ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಾರದೆಂದು ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ’ ಎಂದಿದ್ದಾರೆ.

‘ಬಾರ್‌ಗಳು, ವೈನ್‌ ಶಾಪ್‌ಗಳು, ಪಬ್‌ಗಳು, ಎಂಎಸ್‌ಐಎಲ್ ಮಳಿಗೆ ಸೇರಿ ಎಲ್ಲ ರೀತಿಯ ಮದ್ಯ ಮಾರಾಟ ಮಳಿಗೆಗಳನ್ನು ಬಂದ್ ಮಾಡಬೇಕು. ಆಕಸ್ಮಾತ್ ನಿಯಮ ಮೀರಿದರೆ ಅಂಥ ಮಳಿಗೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದ್ದಾರೆ.

ADVERTISEMENT

ನಗರದ ಈಶಾನ್ಯ ವಿಭಾಗದ ವಿದ್ಯಾರಣ್ಯ ಪುರ, ಯಲಹಂಕ, ಯಲಹಂಕ ನ್ಯೂ ಟೌನ್, ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸೆ. 3ರಂದು ಸಂಜೆ 6 ಗಂಟೆಯಿಂದ ಸೆ. 5ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.

‘ಪೂರ್ವ ವಿಭಾಗದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಗೋವಿಂದಪುರ, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ ಹಾಗೂ ಹಲಸೂರು ಠಾಣೆ ವ್ಯಾಪ್ತಿಯಲ್ಲಿ ಸೆ. 4ರಂದು ಬೆಳಿಗ್ಗೆ 6 ಗಂಟೆಯಿಂದ ಸೆ. 5ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ’ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.