ಬೆಂಗಳೂರು: ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ನಗರದಲ್ಲಿ 41 ಕೆರೆ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ ನಿರ್ಮಿಸಲಾಗಿದ್ದು, 489 ಸಂಚಾರಿ ಟ್ಯಾಂಕ್‌ಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 75 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ. ಕೆರೆಗಳಲ್ಲದೆ, ಸಂಚಾರಿ ಟ್ಯಾಂಕ್‌ಗಳು ಎಲ್ಲ ವಾರ್ಡ್‌ಗಳಲ್ಲಿಯೂ ಲಭ್ಯವಾಗಲಿವೆ. ಗಣೇಶ ಮೂರ್ತಿಗಳ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸಂಪೂರ್ಣ ವಿವರಗಳನ್ನು ವೆಬ್‌ಸೈಟ್: https://apps.bbmpgov.in/ganesh2025/ನಲ್ಲಿ ಪಡೆಯಬಹುದು.
ವಿಸರ್ಜನೆ ಇಲ್ಲ: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿರುವ ಹೇರೋಹಳ್ಳಿ ಕೆರೆಯ ಕಲ್ಯಾಣಿಯಲ್ಲಿ ಪ್ರತಿ ವರ್ಷವೂ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗುತ್ತಿತ್ತು. ಈ ಬಾರಿ ತಾಂತ್ರಿಕ ಕಾರಣಗಳಿಂದ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡಿಲ್ಲ ಎಂದು ಬಿಬಿಎಂಪಿ ತಿಳಿಸಿದೆ.
ಯಡಿಯೂರು ಕೆರೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಗಸ್ಟ್ 27ರಿಂದ ಸೆಪ್ಟೆಂಬರ್ 17ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಯಡಿಯೂರು ಕೆರೆಯಲ್ಲಿ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.