ADVERTISEMENT

ಗಂಗಾ ಕಲ್ಯಾಣ ಯೋಜನೆ: ಮೇಲ್ಮನವಿ ವಜಾ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 19:59 IST
Last Updated 23 ಏಪ್ರಿಲ್ 2019, 19:59 IST

ಬೆಂಗಳೂರು: ಗಂಗಾಕಲ್ಯಾಣ ಯೋಜನೆಗೆ ಸಂಬಂಧಿಸಿದ ಟೆಂಡರ್‌ ನಿಯಮಗಳನ್ನು ಪ್ರಶ್ನಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಜಾ ಮಾಡಿದೆ.

ಈ ಕುರಿತಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಢ್ಲಘಟ್ಟದ, ‘ಶ್ರೀಲಕ್ಷ್ಮೀ ವೆಂಕಟೇಶ್ವರ ಬೋರ್‌ವೆಲ್ಸ್’ ಸಲ್ಲಿಸಿದ್ದ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಜಾ ಮಾಡಿತು.

ಇದರಿಂದಾಗಿ ರಾಜ್ಯದಾದ್ಯಂತ ಆರು ಸಾವಿರಕ್ಕೂ ಹೆಚ್ಚು ಕೊಳವೆ ಬಾವಿ ಕೊರೆಯಿಸುವ ಟೆಂಡರ್ ಅಂತಿಮಗೊಳಿಸಲು ಇದ್ದ ಅಡ್ಡಿ ನಿವಾರಣೆಯಾದಂತಾಗಿದೆ.

ADVERTISEMENT

‘ಸರ್ಕಾರದ ನೀತಿ, ನಿರ್ಣಯದ ವಿಷಯಗಳಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡುವುದಿಲ್ಲ. ಈ ಕುರಿತಂತೆ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶ ಸರಿಯಾಗಿದೆ’ ಎಂಬ ಅಭಿಪ್ರಾಯವನ್ನು ನ್ಯಾಯಪೀಠ ವ್ಯಕ್ತಪಡಿಸಿತು.

ಟೆಂಡರ್ ನಿಯಮಗಳನ್ನು ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ 2019ರ ಫೆಬ್ರುವರಿ 22ರಂದು ವಜಾಗೊಳಿಸಿತ್ತು. ಅರ್ಜಿದಾರರು ಈ ಆದೇಶವನ್ನು ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.