ಬೆಂಗಳೂರು: ‘ಸತತ 40 ವರ್ಷಗಳಿಂದ ರಾಜಕೀಯವಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಗಂಗಾಮತ, ಕೋಲಿ, ಮೊಗವೀರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಗಂಗಮತಸ್ಥರ ಸಂಘ ಒತ್ತಾಯಿಸಿದೆ.
‘ನಮ್ಮ ಸಮುದಾಯುವು ರಾಜಕೀಯವಾಗಿಯಲ್ಲದೆ, ಆರ್ಥಿಕ ಮತ್ತು ಶೈಕ್ಷಣಿಕವಾಗಿಯೂ ಹಿಂದುಳಿದಿದೆ. ಕಳೆದ ಲೋಕಸಭಾ ಚುನಾವಣೆ ಈ ಕುರಿತು ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು’ ಎಂದು ಸಂಘದ ಅಧ್ಯಕ್ಷ ಬಿ. ಮೌಲಾಲಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.