
ಪ್ರಜಾವಾಣಿ ವಾರ್ತೆಅತ್ಯಾಚಾರ
ಸಾಂದರ್ಭಿಕ ಚಿತ್ರ
ಬೆಂಗಳೂರು: ‘ಪಶ್ಚಿಮ ಬಂಗಾಳದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ.
ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದು, ‘ಬೆಂಗಳೂರು ಉತ್ತರ ತಾಲ್ಲೂಕಿನ ಗಂಗೊಂಡನಹಳ್ಳಿಯಲ್ಲಿ ನೆಲಸಿದ್ದ ಗೃಹಿಣಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದಪ್ರಕರಣವನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಈ ಕೃತ್ಯ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಂಡಿರುವ ಬಗ್ಗೆ ಆಯೋಗಕ್ಕೆ ವರದಿ ನೀಡಬೇಕು’ ಎಂದು ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.