ಬೆಂಗಳೂರು: ಗಾಂಜಾ ಸೇವಿಸಿ, ಅದರ ಮತ್ತಿನಲ್ಲಿ ಸುತ್ತಾಡಿ ಸಾರ್ವಜನಿಕರನ್ನು ಬೆದರಿಸುತ್ತಿದ್ದ ಮೂವರು ಬಾಲಕರ ತಂಡವನ್ನು ಪುಲಿಕೇಶಿನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ತಮ್ಮದೇ ತಂಡ ಕಟ್ಟಿಕೊಂಡಿದ್ದ ಬಾಲಕರು, ಠಾಣೆ ವ್ಯಾಪ್ತಿಯಲ್ಲಿ ನಿತ್ಯವೂ ರಾತ್ರಿ ಸುತ್ತಾಡುತ್ತಿದ್ದರು. ಮಾರಕಾಸ್ತ್ರ ಹಿಡಿದು ಜನರನ್ನು ಬೆದರಿಸುತ್ತಿದ್ದರು. ದಾರಿಹೋಕರನ್ನು ಹಾಗೂ ಅಂಗಡಿಗಳಿಗೆ ನುಗ್ಗಿ ಸುಲಿಗೆ ಮಾಡುತ್ತಿದ್ದರು. ಈ ಬಗ್ಗೆ ಸಾರ್ವಜನಿಕರು ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಶನಿವಾರ ರಾತ್ರಿ ಬಾಲಕರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಲಾಯಿತು. ಅವರೆಲ್ಲರೂ ಗಾಂಜಾ ಮತ್ತಿನಲ್ಲಿದ್ದರು. ವೈದ್ಯಕೀಯ ಪರೀಕ್ಷೆ ನಡೆಸಿ, ಬಾಲ ನ್ಯಾಯಮಂಡಳಿಯ ಸುಪರ್ದಿಗೆ ಒಪ್ಪಿಸಲಾಗಿದೆ’ ಎಂದೂ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.