ಬೆಂಗಳೂರು: ಹೈದರಾಬಾದ್ನಿಂದ ಗಾಂಜಾವನ್ನು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿಯ ಶೇಖ್ ಇದ್ರಿಸ್ (36), ಬೆನ್ಸನ್ಟೌನ್ ನಿವಾಸಿ ಖಿಜರ್ (39) ಹಾಗೂಡಿ.ಜೆ. ಹಳ್ಳಿಯ ಫೈರೋಜ್ (25) ಬಂಧಿತರು. ಅವರಿಂದ ₹ 10 ಲಕ್ಷ ಮೌಲ್ಯದ 30 ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ.
‘ಗಾಂಜಾ ಮಾರಾಟ ಮಾಡಲೆಂದೇ ಆರೋಪಿಗಳು ಗ್ಯಾಂಗ್ ಕಟ್ಟಿಕೊಂಡಿದ್ದರು. ಗಾಂಜಾವನ್ನು 10 ಗ್ರಾಂ ಹಾಗೂ 100 ಗ್ರಾಂ ಪೊಟ್ಟಣಗಳಲ್ಲಿ ಹಾಕಿ ₹ 200ರಿಂದ ₹ 500ರವರೆಗೂ ಮಾರಾಟ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.
‘ಕಾರ್ಪೆಂಟರ್ ಹಾಗೂ ಕಟ್ಟಡಗಳ ಒಳಾಂಗಣ ವಿನ್ಯಾಸದ ಸಹಾಯಕರಾಗಿ ಆರೋಪಿಗಳು ಕೆಲಸ ಮಾಡುತ್ತಿದ್ದರು. ಅಕ್ರಮವಾಗಿ ಹಣ ಸಂಪಾದನೆ ಮಾಡುವುದಕ್ಕಾಗಿ ಗಾಂಜಾ ಮಾರಾಟ ಮಾಡಲಾರಂಭಿಸಿದ್ದರು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.