ಬೆಂಗಳೂರು: ಗಾಂಜಾ ಮಾರುತ್ತಿದ್ದ ಆರೋಪದಡಿ ಇಬ್ಬರನ್ನು ಬಂಧಿಸಿರುವ ಇಂದಿರಾನಗರ ಠಾಣೆ ಪೊಲೀಸರು, ₹ 1.20 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.
ಮುರುಗೇಶ್‌ಪಾಳ್ಯದ ಸಿದ್ದಾರ್ಥ (27) ಹಾಗೂ ಉತ್ತರ ಭಾರತದ ಪಾಲಾಷ್‌ಕುಮಾರ್ (28) ಬಂಧಿತರು.
‘ಠಾಣೆ ವ್ಯಾಪ್ತಿಯ ತರಕಾರಿ ಮಳಿಗೆಯೊಂದರ ಬಳಿ ನಿಂತಿದ್ದ ಆರೋಪಿಗಳು, ಪರಿಚಯಸ್ಥ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ, ಅವರನ್ನು ಸೆರೆ ಹಿಡಿಯಲಾಗಿದೆ’ ಎಂದೂ ಹೇಳಿದರು.
‘ಹೊರ ರಾಜ್ಯಗಳಿಂದ ಗಾಂಜಾ ತರುತ್ತಿದ್ದ ಆರೋಪಿಗಳು, ಅದರ ಮಾರಾಟದಿಂದ ಹಣ ಸಂಪಾದನೆ ಮಾಡುತ್ತಿದ್ದರು. ಅದೇ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು’ ಎಂದೂ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.