ADVERTISEMENT

ಬೆಂಗಳೂರು: ₹5.60 ಲಕ್ಷ ಮೌಲ್ಯದ ಗಾಂಜಾ ಜಪ್ತಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 14:41 IST
Last Updated 4 ಸೆಪ್ಟೆಂಬರ್ 2025, 14:41 IST
ಗೋಪಿನಾಥ್‌ ಸಮಲ್‌ 
ಗೋಪಿನಾಥ್‌ ಸಮಲ್‌    

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿದ ವಿವೇಕನಗರ ಠಾಣೆಯ ಪೊಲೀಸರು, ಇಬ್ಬರನ್ನು ಬಂಧಿಸಿ 13 ಕೆ.ಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿಕೊಂಡ ಗಾಂಜಾದ ಮೌಲ್ಯ ₹5.60 ಲಕ್ಷ ಎಂದು ಅಂದಾಜಿಸಲಾಗಿದೆ.

ಒಡಿಶಾದ ಗೋಪಿನಾಥ್‌ ಸಮಲ್‌ (43) ಹಾಗೂ ಬಿಹಾರದ ಬಿರೇಂದರ್ ಪಾಂಡೆ ಬಂಧಿತರು.

ಬಿರೇಂದರ್ ಪಾಂಡೆ ಎಂಬಾತ ಠಾಣಾ ವ್ಯಾಪ್ತಿಯ ಆಸ್ಟಿನ್‌ಟೌನ್‌ನ ನೀಲಸಂದ್ರ ಚೋರ್‌ಪಾರ್ಕ್‌ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಆತನನ್ನು ಬಂಧಿಸಿ ₹60 ಸಾವಿರ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಗೋಪಿನಾಥ್‌ ಸಮಲ್‌ ಎಂಬಾತ ಎಎಸ್‌ಸಿ ಸೆಂಟರ್‌ ಮಿಲ್ಟ್ರಿ ಕಾಂಪೌಂಡ್‌ ಪಕ್ಕದ ಪಾದಚಾರಿ ಮಾರ್ಗದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಆತನಿಂದ ₹5 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಖಚಿತ ಮಾಹಿತಿ ಆಧರಿಸಿ, ಎರಡೂ ಕಡೆ ಕಾರ್ಯಾಚರಣೆ ನಡೆಸಲಾಯಿತು ಎಂದು ಪೊಲೀಸರು ಹೇಳಿದರು.

ADVERTISEMENT

ಆರೋಪಿಗಳು ಹೊರರಾಜ್ಯದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಬಿರೇಂದರ್ ಪಾಂಡೆ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.