ADVERTISEMENT

23 ಕೆ.ಜಿ.ಗಾಂಜಾ ಜಪ್ತಿ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2022, 19:45 IST
Last Updated 23 ಮಾರ್ಚ್ 2022, 19:45 IST
ಆರೋಪಿಗಳಿಂದ ಜಪ್ತಿ ಮಾಡಿರುವ ಗಾಂಜಾ ಮತ್ತು ದ್ವಿಚಕ್ರ ವಾಹನ 
ಆರೋಪಿಗಳಿಂದ ಜಪ್ತಿ ಮಾಡಿರುವ ಗಾಂಜಾ ಮತ್ತು ದ್ವಿಚಕ್ರ ವಾಹನ    

ಬೆಂಗಳೂರು: ಗಾಂಜಾ ಮಾರಾಟ ಜಾಲ ಬೇಧಿಸಿರುವ ಉಪ್ಪಾರಪೇಟೆ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

‘ರಾಕೇಶ್‌ ಹಾಗೂ ಆತನ ಸಹಚರರನ್ನು ಬಂಧಿಸಲಾಗಿದೆ.ಆರೋಪಿಗಳಿಂದ 23 ಕೆ.ಜಿ.320 ಗ್ರಾಂ ತೂಕದ ಗಾಂಜಾ, ₹3 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

‘ಅಪರಿಚಿತ ವ್ಯಕ್ತಿಯೊಬ್ಬ ಠಾಣೆ ವ್ಯಾಪ್ತಿಯ ಉದ್ಯಾನವೊಂದರಲ್ಲಿಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಆತನನ್ನು ಬಂಧಿಸಿ ವಿಚಾರಿಸಿದಾಗ ಇತರ ಇಬ್ಬರು ಕೃತ್ಯದಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ನೀಡಿದ್ದ. ಅದರ ಆಧಾರದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಬುಧವಾರ ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.