ADVERTISEMENT

₹ 23 ಲಕ್ಷ ಮೌಲ್ಯದ 43 ಕೆ.ಜಿ ಮಾದಕ ವಸ್ತು ಗಾಂಜಾ ವಶ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 5:46 IST
Last Updated 4 ಮಾರ್ಚ್ 2020, 5:46 IST
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು   

ಬೆಂಗಳೂರು: ಮಹಿಳೆ ಸೇರಿ ಆರು ಮಂದಿಯನ್ನು ಬಂಧಿಸಿರುವ ಕೇಂದ್ರ ಅಪರಾಧ ದಳ (ಸಿಸಿಬಿ) ಅಧಿಕಾರಿಗಳು, ಆರೋಪಿಗಳಿಂದ ₹ 23 ಲಕ್ಷ ಮೌಲ್ಯದ 43 ಕೆ.ಜಿ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದವರಾದ ಸವಾರ ಕವಿತಾ (23), ಕಿಲ್ಲೊ ಧನುರಾಜೈ (25), ಪಂಗೈ ಮತ್ಯರಾಜು (26), ಉಪ್ಪಲಪಟ್ಟಿ ಸುಬ್ಬಾರೆಡ್ಡಿ (42), ಬೆಂಗಳೂರಿನ ಅಶೋಕನಗರದ ಗೌರವ್ (22), ಬನ್ನೇರುಘಟ್ಟ ರಸ್ತೆಯ ಮಹಮದ್ಅಮ್ಮರ್ ಶಂಷಾದ್ (25) ಬಂಧಿತರು.

ಆರೋಪಿಗಳು ವಿಶಾಖಪಟ್ಟಣದಿಂದ ಬಸ್ಸಿನಲ್ಲಿ ಅಕ್ರಮವಾಗಿ ಗಾಂಜಾ ನಗರಕ್ಕೆ ತಂದು ಇಂದಿರಾನಗರ ಮತ್ತು ಮೈಕೊ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.