ADVERTISEMENT

ವ್ಯಕ್ತಿ ಸೆರೆ: ಗಾಂಜಾ ವಶ

​ಪ್ರಜಾವಾಣಿ ವಾರ್ತೆ
Published 3 ಮೇ 2025, 16:29 IST
Last Updated 3 ಮೇ 2025, 16:29 IST
<div class="paragraphs"><p>ಬಂಧನ </p></div>

ಬಂಧನ

   

ಬೆಂಗಳೂರು: ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿರುವ ಎಜೆಬಿಜೆ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ, 1 ಕೆ.ಜಿ. 20 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ವ್ಯಕ್ತಿಯೊಬ್ಬ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತು. ಪೊಲೀಸರು ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿ, ನಂತರ ಬಾತ್ಮಿದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡರು.

ADVERTISEMENT

ಬಳಿಕ ವಿಚಾರಣೆ ನಡೆಸಿದಾಗ ದಿಣ್ಣೂರು ಬಸ್ ನಿಲ್ದಾಣ ಬಳಿ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆತನಿಂದ ₹45 ಸಾವಿರ ಮೌಲ್ಯದ ಸುಮಾರು 1 ಕೆ.ಜಿ. 20 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.