ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ರೈಲ್ವೆ ಭದ್ರತಾ ಪಡೆಯ ಸಿಬ್ಬಂದಿ ₹4 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.
ರೈಲು ನಿಲ್ದಾಣದಲ್ಲಿ ಪರಿಶೀಲನೆ ನಡೆಸುವಾಗ ಬ್ಯಾಗ್‌ವೊಂದು ಪತ್ತೆಯಾಗಿತ್ತು. ಅದನ್ನು ಪರಿಶೀಲಿಸಿದಾಗ, ಪ್ಲಾಸ್ಟಿಕ್ ಸುತ್ತಿ ಅದರ ಒಳಗೆ ಗಾಂಜಾ ಇಡಲಾಗಿತ್ತು. ಬ್ಯಾಗ್‌ನಲ್ಲಿ ಅಂದಾಜು 5.22 ಕೆ.ಜಿ ಗಾಂಜಾ ಪತ್ತೆಯಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಮಾದಕ ವಸ್ತು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ(ಎನ್‌ಡಿಪಿಎಸ್) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.