ADVERTISEMENT

₹ 3 ಲಕ್ಷ ಮೌಲ್ಯದ ಗಾಂಜಾ ಜಪ್ತಿ  

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 11:50 IST
Last Updated 25 ಆಗಸ್ಟ್ 2020, 11:50 IST
ಜಪ್ತಿ ಮಾಡಲಾದ ಗಾಂಜಾ ಪೊಟ್ಟಣ
ಜಪ್ತಿ ಮಾಡಲಾದ ಗಾಂಜಾ ಪೊಟ್ಟಣ   

ಬೆಂಗಳೂರು: ಕೆ.ಆರ್. ಪುರ ರೈಲ್ವೆ ನಿಲ್ದಾಣ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಎಸ್. ರಾಮಬಾಬು (41) ಎಂಬಾತನನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದು, ಆತನಿಂದ ₹ 3 ಲಕ್ಷ ಮೌಲ್ಯದ 10 ಕೆ.ಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

‘ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ರಾಮಬಾಬು, ಹಲವು ವರ್ಷಗಳಿಂದ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ತನ್ನೂರಿನಿಂದ ಆಗಾಗ ಬೆಂಗಳೂರಿಗೆ ಬರುತ್ತಿದ್ದ ಆರೋಪಿ, ರೈಲ್ವೆ ನಿಲ್ದಾಣ ಹಾಗೂ ನಗರದ ಹಲವು ಪ್ರದೇಶಗಳಲ್ಲಿ ಗಾಂಜಾ ಮಾರುತ್ತಿದ್ದ. ಕಾಯಂ ಗ್ರಾಹಕರು ಈತನ ಬಳಿ ಗಾಂಜಾ ಖರೀದಿಸುತ್ತಿದ್ದರು’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.