ADVERTISEMENT

₹ 44 ಲಕ್ಷ ಮೌಲ್ಯದ ಗಾಂಜಾ ಜಪ್ತಿ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 21:05 IST
Last Updated 25 ಜನವರಿ 2023, 21:05 IST
   

ಬೆಂಗಳೂರು: ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆಂಧ್ರಪ್ರದೇಶದ ಪಲ್ಲ ನಾಗರಾಜ್ (30) ಹಾಗೂ ನೇಗುಲ ನೊಗರಾಜು (26) ಬಂಧಿತರು. ಇವರಿಂದ ₹ 44 ಲಕ್ಷ ಮೌಲ್ಯದ 116 ಕೆ.ಜಿ. ಗಾಂಜಾ ಹಾಗೂ ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸಣ್ಣಪುಟ್ಟ ಕೆಲಸ ಮಾಡುತ್ತಿದ್ದ ಆರೋಪಿಗಳಿಗೆ, ಅದರಿಂದ ಬರುತ್ತಿದ್ದ ಹಣ ಸಾಲುತ್ತಿರಲಿಲ್ಲ. ಐಷಾರಾಮಿ ಜೀವನ ನಡೆಸಲು ಹಣ ಹೊಂದಿಸಲು ಗಾಂಜಾ ಮಾರಾಟಕ್ಕೆ ಇಳಿದಿದ್ದರು. ಊರಿ
ನಿಂದ ಬೆಂಗಳೂರಿಗೆ ಗಾಂಜಾ ತಂದು, ಮಧ್ಯವರ್ತಿಗಳ ಮೂಲಕ ಗ್ರಾಹಕರಿಗೆ ತಲುಪಿಸುತ್ತಿದ್ದರು’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.