ADVERTISEMENT

ಬೆಂಗಳೂರು: ನಗರದ ಕಸ ವಿಲೇವಾರಿ ಪುನರ್ ಆರಂಭ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2022, 20:43 IST
Last Updated 19 ಫೆಬ್ರುವರಿ 2022, 20:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದಲ್ಲಿ ಕಸ ವಿಲೇವಾರಿ ಮಾಡಿರುವ ಎಂಟು ತಿಂಗಳ ಬಿಲ್ ಬಾಕಿ ಪಾವತಿಗೆ ಆಗ್ರಹಿಸಿ ಪ್ರತಿಭಟನೆ ಆರಂಭಿಸಿದ್ದ ಕಸ ವಿಲೇವಾರಿ ಗುತ್ತಿಗೆದಾರರ ಜತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಶನಿವಾರ ಸಂಧಾನ ಸಭೆ ನಡೆಸಿದರು. ಮುಖ್ಯ ಆಯುಕ್ತರ ಭರವಸೆಗೆ ಒಪ್ಪಿದ ಗುತ್ತಿಗೆದಾರರು ಮತ್ತು ಕಾರ್ಮಿಕರು ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಮರಳಿದ್ದಾರೆ.

‘ವಿಶೇಷ ಆಯುಕ್ತರಾದ (ಹಣಕಾಸು) ತುಳಸಿ ಮದ್ದಿನೇನಿ ಅವರ ಸರ್ವಾಧಿಕಾರಿ ಧೋರಣೆಯಿಂದಾಗಿ, ಎಂಟು ತಿಂಗಳುಗಳಿಂದ ಸುಮಾರು ₹250 ಕೋಟಿ ಬಿಲ್ ಬಾಕಿ ಉಳಿದಿದೆ. ಕೂಡಲೇ ಬಿಲ್ ಪಾವತಿ ಮಾಡಬೇಕು’ ಎಂದು ಆಗ್ರಹಿಸಿ ಬಿಬಿಎಂಪಿ ಕಚೇರಿ ಎದುರು ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದರು.

ಕಸ ವಿಲೇವಾರಿಯನ್ನೂ ಸ್ಥಗಿತಗೊಳಿಸಿದ್ದರು. ಇದರಿಂದಾಗಿ ನಗರದಲ್ಲಿ ಎಲ್ಲೆಂದರಲ್ಲಿ ಕಸ ರಾಶಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಶನಿವಾರ ಬೆಳಿಗ್ಗೆ ಕ್ರಿಯಾ ಸಮಿತಿ ಪದಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಜತೆ ಗೌರವ್ ಗುಪ್ತ ಅವರು ಸಭೆ ನಡೆಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.ಮುಖ್ಯ ಆಯುಕ್ತರ ಮನವಿ ಪರಿಗಣಿಸಿದ ಗುತ್ತಿಗೆದಾರರು, ಶನಿವಾರ ಮಾಧ್ಯಾಹ್ನದಿಂದಲೇ ಕಸ ವಿಲೇವಾರಿ ಕಾರ್ಯ ಆರಂಭಿಸಿದರು.ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದೇವೆ’ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್‌.ಎನ್. ಬಾಲಸುಬ್ರಹ್ಮಣ್ಯ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.