ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಗಾರ್ವೆಬಾವಿಪಾಳ್ಯ ಹಾಗೂ ಕೆಂಪಾಂಬುಧಿ ಕೆರೆ ಒತ್ತುವರಿ ತೆರವು ಮಾಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅರಣ್ಯ, ಹವಾಮಾನ ಕ್ರಿಯಾಕೋಶದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದರು.
ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಗಾರ್ವೆಬಾವಿಪಾಳ್ಯ ಕೆರೆಯು ದಕ್ಷಿಣ ತಾಲ್ಲೂಕು ಹೊಂಗಸಂದ್ರ ಗ್ರಾಮದ ಸರ್ವೆ ನಂ. 49ರಲ್ಲಿ 17 ಎಕರೆ 30 ಗುಂಟೆ ಪ್ರದೇಶದಲ್ಲಿದೆ. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗಿದ್ದರಿಂದ ಕೆರೆಯ ಪ್ರದೇಶಕ್ಕೆ ಬೇಲಿ ಹಾಕಲಾಗಿದೆ. ಜಿಬಿಎ ವತಿಯಿಂದ ಅಭಿವೃದ್ಧಿಪಡಿಸಲಾಗುತ್ತದೆ ಎಂದರು.
ಕೆಂಪಾಂಬುಧಿ ಕೆರೆಯಲ್ಲಿ 15 ಗುಂಟೆ ಒತ್ತುವರಿಯನ್ನು ತೆರವುಗೊಳಿಸಿ, ತಂತಿ ಬೇಲಿಯನ್ನು ಹಾಕಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.