ADVERTISEMENT

Bengaluru Crime: ಗ್ಯಾಸ್‌ ಸಿಲಿಂಡರ್‌, ದ್ವಿಚಕ್ರ ವಾಹನ ಕಳ್ಳತನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 23:50 IST
Last Updated 24 ಸೆಪ್ಟೆಂಬರ್ 2025, 23:50 IST
<div class="paragraphs"><p>ಪೊಲೀಸ್</p></div>

ಪೊಲೀಸ್

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ದ್ವಿಚಕ್ರ ವಾಹನ ಮತ್ತು ಗ್ಯಾಸ್‌ ಸಿಲಿಂಡರ್‌ಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಕೋರಮಂಗಲದ ವೆಂಕಟಾಪುರ ನಿವಾಸಿ ಟಿ.ಮುನಿರಾಜು(33) ಬಂಧಿತ ಆರೋಪಿ.

ಬಂಧಿತನಿಂದ ₹8.5 ಲಕ್ಷ ಮೌಲ್ಯದ 20 ಗ್ಯಾಸ್‌ ಸಿಲಿಂಡರ್‌ ಮತ್ತು 11 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಗುಂಜೂರು ಗ್ರಾಮದ ಹೊಸಹಳ್ಳಿ ರಸ್ತೆಯ ಶ್ರೀರಾಮ ದೇವಸ್ಥಾನದ ಬಳಿ ಸುರೇಶ್ ಅವರು ನಿಲುಗಡೆ ಮಾಡಿದ್ದ ಬೈಕ್ ಕಳವು ಮಾಡಿದ್ದ. ಕದ್ದ ಬೈಕ್‌ನಲ್ಲಿ ಕಮರ್ಷಿಯಲ್ ಸಿಲಿಂಡರ್‌ ಕಳವು ಮಾಡುತ್ತಿದ್ದ. ಆರೋಪಿಯ ಬಂಧನದಿಂದ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ವರ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.