ಸಾವು (ಪ್ರಾತಿನಿಧಿಕ ಚಿತ್ರ)
ಪೀಣ್ಯ ದಾಸರಹಳ್ಳಿ: ಚೊಕ್ಕಸಂದ್ರದ ಬಾಡಿಗೆ ಮನೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸಂಭವಿಸಿದ ಸ್ಫೋಟದಿಂದ ಗಾಯಗೊಂಡಿದ್ದ ಐವರ ಪೈಕಿ, ಮಹಿಳೆಯೊಬ್ಬರು ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಸ್ಸಾಂನ ಅಂಜಲಿ ದಾಸ್(27) ಮೃತಪಟ್ಟವರು. ಅವರ ಪತಿ ಬಿಜುದಾಸ್( 34) ಹಾಗೂ ಅವರ ಮೂರು ವರ್ಷದ ಹೆಣ್ಣು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಇದೇ ಘಟನೆಯಲ್ಲಿ ಗಾಯಗೊಂಡಿದ್ದ ಮಂಜುನಾಥ್(25), ತಿಪ್ಪೇರುದ್ರಸ್ವಾಮಿ(50) ಹಾಗೂ ಶೋಭಾ(60) ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇವರನ್ನು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆ ಹಾಗೂ ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.
ಚೊಕ್ಕಸಂದ್ರದ ಮೂರು ಅಂತಸ್ತಿನ ಕಟ್ಟಡದ ನೆಲಮಹಡಿಯ ಬಾಡಿಗೆ ಮನೆಯಲ್ಲಿ ಬಿಜುದಾಸ್ ದಂಪತಿ ವಾಸವಿದ್ದರು. ಆ ಮನೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಅವಘಡದಿಂದ ಆರು ಮಂದಿ ಗಾಯಗೊಂಡಿದ್ದರು. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.