ADVERTISEMENT

ಬೆಂಗಳೂರು | ಅಡುಗೆ ಅನಿಲ ಸೋರಿಕೆಯಿಂದ ಅವಘಡ: ಇಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2025, 0:00 IST
Last Updated 15 ಡಿಸೆಂಬರ್ 2025, 0:00 IST
<div class="paragraphs"><p>ಪೊಲೀಸ್</p></div>

ಪೊಲೀಸ್

   

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಯ್ಯರೆಡ್ಡಿ ಪಾಳ್ಯದ ಮನೆಯೊಂದರಲ್ಲಿ ಗುರುವಾರ ಮುಂಜಾನೆ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸಂಭವಿಸಿದ ಬೆಂಕಿ ಅವಘಡದಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಅಬ್ಬಯ್ಯರೆಡ್ಡಿ ಪಾಳ್ಯದ ನಿವಾಸಿಗಳಾದ ಹನುಮಂತಪ್ಪ (70) ಹಾಗೂ ಮಂಜುನಾಥ್‌(34) ಗಾಯಗೊಂಡವರು. ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯ ವಿಭಾಗಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮನೆಯಲ್ಲಿ ಐದು ಮಂದಿ ವಾಸಿಸುತ್ತಿದ್ದರು. ಬುಧವಾರ ರಾತ್ರಿ ಎಲ್ಲರೂ ಮನೆಯಲ್ಲೇ ಊಟ ಮಾಡಿ ಮಲಗಿದ್ದರು. ಗುರುವಾರ ಬೆಳಿಗ್ಗೆ ಕೆಲಸಕ್ಕೆ ತೆರಳಲು ಮಂಜುನಾಥ್‌ ಅವರು ಬೇಗ ಎದ್ದಿದ್ದರು. ಅಡುಗೆ ಸಿಲಿಂಡರ್‌ನಿಂದ ಅನಿಲ ಸೋರಿಕೆ ಆಗಿದ್ದು, ಅವರ ಗಮನಕ್ಕೆ ಬಂದಿರಲಿಲ್ಲ. ಸ್ಟೌ ಆನ್‌ ಮಾಡಲು ಹೋದಾಗ ಬೆಂಕಿ ಹೊತ್ತಿಕೊಂಡಿದೆ. ಆಗ ಇಬ್ಬರು ಗಾಯಗೊಂಡಿದ್ದಾರೆ. ಮನೆಯಲ್ಲಿದ್ದ ಪೀಠೋಪಕರಣ ಹಾಗೂ ಬಟ್ಟೆಗಳು ಭಸ್ಮವಾಗಿವೆ ಎಂದು ಪೊಲೀಸರು ಹೇಳಿದರು.

ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.