ಬಂಧನ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಸಿಲಿಂಡರ್‌ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು ಚಿಕ್ಕ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳಿಗೆ ಅಕ್ರಮವಾಗಿ ರೀ–ಫಿಲ್ಲಿಂಗ್ ಮಾಡಿ, ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜಯನಗರದ ನಿವಾಸಿ ನಜೀರ್ ಅಹಮ್ಮದ್ (50) ಬಂಧಿತ.
ಆರೋಪಿಯಿಂದ ₹4 ಲಕ್ಷ ಮೌಲ್ಯದ 80 ಸಿಲಿಂಡರ್ ಜಪ್ತಿ ಮಾಡಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರಿಗೆ ಶೋಧ ಮುಂದುವರೆಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.