ADVERTISEMENT

ಬಿಬಿಎಂಪಿಗೆ ಗೌರವ್‌ ಗುಪ್ತ ಆಡಳಿತಾಧಿಕಾರಿ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 19:41 IST
Last Updated 10 ಸೆಪ್ಟೆಂಬರ್ 2020, 19:41 IST
ಗೌರವ್‌ ಗುಪ್ತಾ
ಗೌರವ್‌ ಗುಪ್ತಾ   

ಬೆಂಗಳೂರು: ಹಿರಿಯ ಐಎಎಸ್‌ ಅಧಿಕಾರಿ ಗೌರವ್‌ ಗುಪ್ತ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಡಳಿತಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ.

ಗೌರವ್‌ ಗುಪ್ತ 1990ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿಯ ಜತೆಗೆ ಆಡಳಿತಾಧಿಕಾರಿ ಹುದ್ದೆಯನ್ನೂ ನಿಭಾಯಿಸಲಿದ್ದಾರೆ.

ಬಿಬಿಎಂಪಿಗೆ ಚುನಾವಣೆ ಪ್ರಕ್ರಿಯೆ ಮುಗಿದು ಹೊಸ ಆಡಳಿತ ಬರುವವರೆಗೆ ಆಡಳಿತಾಧಿಕಾರಿಯೇ ಮುಖ್ಯಸ್ಥರಾಗಿರುತ್ತಾರೆ. ಬಿಬಿಎಂಪಿಗೆ ಚುನಾವಣೆ ನಡೆಸಲು ಸಿದ್ಧತೆ ನಡೆಸುತ್ತಿರುವುದಾಗಿ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಚುನಾವಣೆಗೆ ಮೊದಲೇ ಬೆಂಗಳೂರಿಗೆ ಪ್ರತ್ಯೇಕ ಕಾನೂನು ರೂಪಿಸಿ ವಾರ್ಡ್‌ಗಳ‌ ಸಂಖ್ಯೆ ಹೆಚ್ಚಿಸುವುದು, ಮೇಯರ್‌ ಅವಧಿಯನ್ನು ಹೆಚ್ಚಿಸುವುದು ಸೇರಿ ಹಲವು ಬದಲಾವಣೆಗಳನ್ನು ತರಲು ಬಿಜೆಪಿ ಸರ್ಕಾರ ತಯಾರಿ ನಡೆಸುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.