ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ– ಶೈಕ್ಷಣಿಕ ಸಮೀಕ್ಷೆಯು ರಾಜ್ಯದಾದ್ಯಂತ ಶೇ 90 ದಾಟಿದ್ದರೆ ಗ್ರೇಟರ್ ಬೆಂಗಳೂರು (ಜಿಬಿಎ) ವ್ಯಾಪ್ತಿಯಲ್ಲಿ ಮಾತ್ರ ಕುಂಟುತ್ತಾ ಸಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಶೇ 37ರಷ್ಟು ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಶೇ 63ರಷ್ಟು ಸಮೀಕ್ಷೆ ನಡೆಯಬೇಕಿದೆ.
ನಗರದಲ್ಲಿ ಸುಮಾರು 46 ಲಕ್ಷ ಮನೆಗಳಿವೆ. ಅವುಗಳ ಸಮೀಕ್ಷೆಗೆ 21 ಸಾವಿರ ಸಮೀಕ್ಷಕರನ್ನು ನಿಯೋಜಿಸಲಾಗಿದೆ. ಇಲ್ಲಿಯವರೆಗೆ 17.20 ಲಕ್ಷ ಮನೆಗಳ ಸಮೀಕ್ಷೆ ಮುಗಿದಿದೆ. ಶುಕ್ರವಾರ ಒಂದೇ ದಿನ 5 ನಗರ ಪಾಲಿಕೆಗಳಲ್ಲಿ 76,695 ಮನೆಗಳ ಸಮೀಕ್ಷೆ ನಡೆಸಲಾಗಿದೆ.
ಸಮೀಕ್ಷಕರು ಮನೆಗಳಿಗೆ ಬಂದಾಗ ನಾಗರಿಕರು ಸಮೀಕ್ಷೆಯಲ್ಲಿ ಭಾಗವಹಿಸಿ, ಸಹಕಾರ ನೀಡಬೇಕು ಎಂದು ಅಧಿಕಾರಿಗಳು ಕೋರಿದ್ದಾರೆ. ಸ್ವತಃ ಆನ್‌ಲೈನ್ (https://kscbcselfdeclaration.karnataka.gov.in) ಮೂಲಕವೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬಹುದು ಎಂದು ಜಿಬಿಎ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.