ವಿಧಾನ ಪರಿಷತ್ ಕಲಾಪ ವೀಕ್ಷಣೆಗೆ ಗುರುವಾರ ವೀಕ್ಷಕರ ಗ್ಯಾಲರಿಯಲ್ಲಿ ಯುವಜನರ ಹಾಜರಾತಿ ಗಮನಸೆಳೆಯಿತು
– ಪ್ರಜಾವಾಣಿ ಚಿತ್ರ
ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಮಾಡಲಾದ ತಿದ್ದುಪಡಿಗಳೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ–2025’ ಕ್ಕೆ ವಿಧಾನಸಭೆಯಲ್ಲಿ ಗುರುವಾರ ಮರು ಅಂಗೀಕಾರ ನೀಡಲಾಯಿತು.
ವಿಧಾನಸಭೆಯಲ್ಲಿ ಅಂಗೀಕಾರ ಪಡೆದ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಕೈಗಾರಿಕಾ ಆಸ್ತಿಗಳಿಗೆ ಸಂಬಂಧಿಸಿದ ಕಟ್ಟಡ ನಕ್ಷೆ ಅನುಮೋದನೆಗೂ ಮುನ್ನ ಪ್ರಾಧಿಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ಮತ್ತು ವಾರ್ಡ್ ಸಮಿತಿಗಳ ಏಳು ಸದಸ್ಯರನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲು ಅವಕಾಶ ಕಲ್ಪಿಸುವ ತಿದ್ದುಪಡಿಗಳೊಂದಿಗೆ ವಿಧಾನ ಪರಿಷತ್ ಬುಧವಾರ ಒಪ್ಪಿಗೆ ನೀಡಿತ್ತು.
ವಿಧಾನ ಪರಿಷತ್‌ನ ಅಂಗೀಕಾರ ಪಡೆದ ಸ್ವರೂಪದ ಮಸೂದೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಮಂಡಿಸಿದರು. ಧ್ವನಿಮತದ ಮೂಲಕ ಅಂಗೀಕಾರ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.