ADVERTISEMENT

ಜಿಬಿಎ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರಕ್ಕೆ ವಿನಾಯಿತಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 20:12 IST
Last Updated 14 ಅಕ್ಟೋಬರ್ 2025, 20:12 IST
ಜಿಬಿಎ
ಜಿಬಿಎ   

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನದಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದರಿಂದ ವಿನಾಯಿತಿ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1200 ಚದರಡಿ ನಿವೇಶನದಲ್ಲಿ ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್‌ +3 ಅಂತಸ್ತುಗಳವರೆಗಿನ ವಸತಿ ಕಟ್ಟಡಗಳಿಗೆ ಒಸಿ ಅಗತ್ಯವಿಲ್ಲ. ಅ.9ರಂದು ನಡೆದ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಣಯದಂತೆ ಈ ಆದೇಶ ಹೊರಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT