ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜಿಲೆಟಿನ್ ಹಾಗೂ ಡಿಟೊನೇಟರ್ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಕೋಲಾರದ ಶಿವಕುಮಾರ್, ನವೀನ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಕರಣದಲ್ಲಿ 22 ಜೀವಂತ ಜಿಲೆಟಿನ್ ಕಡ್ಡಿಗಳು ಹಾಗೂ 30 ಎಲೆಕ್ಟ್ರಿಕ್ ಡಿಟೊನೇಟರ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆರೋಪಿಗಳು ಕೋಲಾರದಿಂದ ಜಿಲೆಟಿನ್, ಡಿಟೊನೇಟರ್ ಸೇರಿ ಮತ್ತಿತರ ಸ್ಫೋಟಕ ಸಾಮಗ್ರಿಗಳನ್ನು ವಾಹನಗಳಲ್ಲಿ ಸಾಗಿಸುತ್ತಿದ್ದರು. ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಕ್ವಾರಿ, ಕೊಳೆವೆಬಾವಿ ಕೊರೆಸಲು ಅಗತ್ಯವಿರುವ ಕಡೆಗಳಲ್ಲಿ ಸ್ಫೋಟಕಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದರು.
ಜುಲೈ 23ರಂದು ಮಧ್ಯಾಹ್ನ ಕಲಾಸಿಪಾಳ್ಯದ ಶೌಚಾಲಯದ ಬಳಿ ಜಿಲೆಟಿನ್, ಡಿಟೊನೇಟರ್ ಪತ್ತೆಯಾಗಿದ್ದವು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಕಲಾಸಿಪಾಳ್ಯ ಠಾಣೆಯ ಪೊಲೀಸರು ಈ ಹಿಂದೆ ಗಣೇಶ್, ಶಿವ ಹಾಗೂ ಮುನಿಯಪ್ಪ ಎಂಬುವರನ್ನು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.