ಬೆರಳಚ್ಚು ಸ್ಕ್ಯಾನರ್ (ಆಧಾರ್ ಬಯೋಮೆಟ್ರಿಕ್) ಮೂಲಕ ದೃಢೀಕರಣ ವ್ಯವಸ್ಥೆ...
ಬೆಂಗಳೂರು: ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಲ್ಲಿ ಹಲವು ನ್ಯೂನತೆಗಳು ಕಾಣಿಸಿಕೊಂಡಿದ್ದರಿಂದ ಆರೋಗ್ಯ ಇಲಾಖೆಯು ತನ್ನ ವ್ಯಾಪ್ತಿಯ ಕಚೇರಿ, ಸಂಸ್ಥೆ ಹಾಗೂ ಆಸ್ಪತ್ರೆಗಳಲ್ಲಿ ‘ಜಿಯೋಫೆನ್ಸ್’ಹಾಜರಾತಿ ವ್ಯವಸ್ಥೆ ಜಾರಿಗೆ ಆದೇಶಿಸಿದೆ.
ಮೊಬೈಲ್ ಆಧಾರಿತ ಈ ವ್ಯವಸ್ಥೆ, ಆಗಸ್ಟ್ 1ರಿಂದ ಜಾರಿಯಾಗಲಿದೆ. ಇಲಾಖೆಯಡಿಯ ಎಲ್ಲ ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ನೂತನ ವ್ಯವಸ್ಥೆ ಮೂಲಕ ಹಾಜರಾತಿ ದಾಖಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಹಾಲಿ ಇರುವ ಆಧಾರ್ ಆಧಾರಿತ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಲ್ಲಿ (ಎಇಬಿಎಎಸ್) ಹಲವು ನ್ಯೂನತೆಗಳಿವೆ. ಈ ಉಪಕರಣಗಳು ಕೆಟ್ಟು ಹೋಗುತ್ತಿದ್ದು, ಪ್ರತಿ ವರ್ಷ ರಿಪೇರಿ ಮಾಡಬೇಕಾಗಿದೆ. ಇದಕ್ಕಾಗಿ ನುರಿತ ಮಾನವ ಸಂಪನ್ಮೂಲ ಹಾಗೂ ಅನುದಾನ ಅಗತ್ಯ. ಆದ್ದರಿಂದ ಕರ್ನಾಟಕ ಆಡಳಿತ ಸುಧಾರಣೆ ಆಯೋಗದ ವರದಿಯಲ್ಲಿನ ಶಿಫಾರಸ್ಸಿನಂತೆ ನೂತನ ವ್ಯವಸ್ಥೆ ಅಳವಡಿಸಿಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.