ADVERTISEMENT

ಬಿಬಿಎಂಪಿ ಚುನಾವಣೆಗೆ ಸಜ್ಜಾಗಿ: ಸಚಿವ ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 19:31 IST
Last Updated 29 ಜನವರಿ 2022, 19:31 IST
ಸಚಿವ ಗೋಪಾಲಯ್ಯ ಹಾಗೂ ರಾಜ್ಯ ಬಿಜೆಪಿ ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ನೆ.ಲ.ನರೇಂದ್ರಬಾಬು ಸಭೆಯಲ್ಲಿ ಭಾಗವಹಿಸಿದ್ದರು. ಬಿಜೆಪಿ ಉತ್ತರ ಜಿಲ್ಲಾ ಅಧ್ಯಕ್ಷ ನಾರಾಯಣ ಗೌಡ, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮುಖಂಡರಾದ ರಾಜೇಂದ್ರಕುಮಾರ್, ಮಹದೇವ್ ಇದ್ದರು.
ಸಚಿವ ಗೋಪಾಲಯ್ಯ ಹಾಗೂ ರಾಜ್ಯ ಬಿಜೆಪಿ ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ನೆ.ಲ.ನರೇಂದ್ರಬಾಬು ಸಭೆಯಲ್ಲಿ ಭಾಗವಹಿಸಿದ್ದರು. ಬಿಜೆಪಿ ಉತ್ತರ ಜಿಲ್ಲಾ ಅಧ್ಯಕ್ಷ ನಾರಾಯಣ ಗೌಡ, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಮುಖಂಡರಾದ ರಾಜೇಂದ್ರಕುಮಾರ್, ಮಹದೇವ್ ಇದ್ದರು.   

ಬೆಂಗಳೂರು: ‘ಏಪ್ರಿಲ್‌ ಕೊನೆಯ ಅಥವಾ ಮೇ ಮೊದಲ ವಾರ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದಕ್ಕಾಗಿ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ವಾರ್ಡ್‌ ಮಟ್ಟದಲ್ಲಿ ನಿರಂತರ ಸಭೆಗಳನ್ನು ನಡೆಸುವ ಮೂಲಕ ಮತದಾರರ ಮನಗೆಲ್ಲಬೇಕು’ ಎಂದು ಸಚಿವ ಕೆ.ಗೋಪಾಲಯ್ಯ ಅವರು ಕಾರ್ಯಕರ್ತರಿಗೆ ತಿಳಿಸಿದರು.

ಬಿಬಿಎಂ‍ಪಿ ಚುನಾವಣೆ ಸಂಬಂಧ ಚರ್ಚಿಸುವ ಸಲುವಾಗಿ ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ನಾಗಪುರ ವಾರ್ಡ್‌ನಲ್ಲಿ ನಡೆದ ಸಭೆಯಲ್ಲಿ ಅವರು ಶನಿವಾರ ಮಾತನಾಡಿದರು.

‘ಕ್ಷೇತ್ರದ 7 ವಾರ್ಡ್‌ಗಳ ಅಭಿವೃದ್ಧಿ ಕಾಮಗಾರಿಗಳ ಪಟ್ಟಿ ತಯಾರಿಸಲಾಗಿದ್ದು, ಮುಖ್ಯಮಂತ್ರಿ ಬಳಿ ಅನುದಾನ ಕೋರಿದ್ದೇನೆ. ಮುಂದಿನ ಕೆಲ ದಿನಗಳಲ್ಲಿ ಅನುದಾನ ಬಿಡುಗಡೆಯಾಗಲಿದೆ. ಪಕ್ಷದ ಸಂಘಟನೆ ಕುರಿತು ನಿರಂತರ ಸಭೆಗಳನ್ನು ನಡೆಸಲಾಗುತ್ತದೆ. ಚುನಾವಣೆಯಲ್ಲಿ ಎಲ್ಲರಿಗೂ ಟಿಕೆಟ್‌ ಸಿಗುವುದಿಲ್ಲ. ಈ ವಿಷಯದಲ್ಲಿ ಪಕ್ಷದ ತೀರ್ಮಾನವೇ ಅಂತಿಮ. ಅಂತಹ ಸಂದರ್ಭದಲ್ಲಿ ಅಭ್ಯರ್ಥಿಗಳು ಪಕ್ಷಕ್ಕಾಗಿ ತ್ಯಾಗ ಮಾಡಬೇಕು’ ಎಂದು ತಿಳಿಸಿದರು.

ADVERTISEMENT

‘ಬಿಬಿಎಂಪಿ ಚುನಾವಣೆಯು ರಾಜ್ಯ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಹೀಗಾಗಿ ಕ್ಷೇತ್ರದ ಒಂಬತ್ತು ವಾರ್ಡ್‌ಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಜನರ ಜೊತೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು’ ಎಂದು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.