ಪೊಲೀಸ್ – ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಹೋಮ್ ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕೆ ಶಾಲೆಯ ಹೊರಾಂಗಣದಲ್ಲಿ ನಿಲ್ಲಿಸಿದ್ದ ವಿದ್ಯಾರ್ಥಿನಿ ತಲೆ ತಿರುಗಿ ಎರಡನೇ ಮಹಡಿಯಿಂದ ಬಿದ್ದಿದ್ದು, ಕೈ ಮತ್ತು ಕಾಲುಗಳಿಗೆ ಸಣ್ಣ ಗಾಯಗಳಾಗಿವೆ.
ಸದ್ಯ ವಿದ್ಯಾರ್ಥಿನಿ ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮಲ್ಲೇಶ್ವರದ ಸರ್ಕಾರಿ ಶಾಲೆಯೊಂದರಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿರುವ 12 ವರ್ಷದ ವಿದ್ಯಾರ್ಥಿನಿ ಹೋಮ್‌ವರ್ಕ್ ಮಾಡಿರಲಿಲ್ಲ. ಹಾಗಾಗಿ ಶಾಲಾ ಕೊಠಡಿಯ ಹೊರಗೆ ನಿಲ್ಲಿಸಲಾಗಿತ್ತು ಎನ್ನಲಾಗಿದೆ. ಮಧ್ಯಾಹ್ನ 1 ಗಂಟೆಗೆ ತಲೆ ಸುತ್ತಿ 2ನೇ ಮಹಡಿಯಿಂದ ಕೆಳಗೆ ಬಿದ್ದಳು. ತಕ್ಷಣ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಆಕೆಯನ್ನು ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು.
ಮಲ್ಲೇಶ್ವರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.