ADVERTISEMENT

ಪೋಕ್ಸೊ: ಟೆಂಪೊ ಚಾಲಕನಿಗೆ 3 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2023, 16:20 IST
Last Updated 18 ಆಗಸ್ಟ್ 2023, 16:20 IST
– ಪ್ರಾತಿನಿಧಿಕ ಚಿತ್ರ
   – ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಟೆಂಪೊ ಚಾಲಕ ಎಚ್‌.ಕೆ. ಗಣೇಶ್‌ಗೆ (23) ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ.

ಜ್ಞಾನಭಾರತಿ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ರೂಪಾ ಕೆ.ಎನ್. ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ ವಾದಿಸಿದ್ದರು.

ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಆರೋಪಿ, ‘ನಾನು ನಿನ್ನನ್ನು ಪ್ರೀತಿಸುತ್ತೇನೆ’ ಎಂದು ದುಂಬಾಲು ಬಿದ್ದಿದ್ದ. ಮದುವೆ ಮಾಡಿಕೊಳ್ಳುವುದಾಗಿ ಹೇಳಿ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ನೊಂದ ಬಾಲಕಿ, ಪೋಷಕರಿಗೆ ವಿಷಯ ತಿಳಿಸಿದ್ದರು.

ADVERTISEMENT

ಕೃತ್ಯದ ಬಗ್ಗೆ ಪೋಷಕರು ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.