ADVERTISEMENT

ರಸ್ತೆಯಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2023, 21:23 IST
Last Updated 8 ಫೆಬ್ರುವರಿ 2023, 21:23 IST
   

ಬೆಂಗಳೂರು: ನಗರದ ಕುಮಾರಸ್ವಾಮಿ ಲೇಔಟ್‌ನ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿ ಮೇಲೆ ಮಂಗಳವಾರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಕುಮಾರಸ್ವಾಮಿ ಲೇಔಟ್‌ನ 4ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

‘ಆರೋಪಿಗಳು ಯುವತಿಯ ಕೈಹಿಡಿದು ಎಳೆದಿದ್ದಾರೆ. ಆಕೆಯ ಕೈಯನ್ನು ಕಚ್ಚಿ ವಿಕೃತಿ ಮೆರೆದಿದ್ದಾರೆ. ಅಲ್ಲಿಂದ ಆಕೆಯನ್ನು ಎಳೆದೊಯ್ಯಲು ಮುಂದಾಗಿದ್ದ ವೇಳೆ ಸ್ಥಳಕ್ಕೆ ಬಂದ ಬೈಕ್‌ ಸವಾರನೊಬ್ಬ ಯುವತಿ ರಕ್ಷಿಸಿದ್ದಾನೆ. ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಯುವತಿ ಪೊಲೀಸರಿಗೆ ದೂರು ನೀಡಿಲ್ಲ’ ಎನ್ನಲಾಗಿದೆ.

‘ಆ ರೀತಿಯ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಮಾರ್ಗದಲ್ಲಿರುವ ಸಿ.ಸಿ. ಟಿ.ವಿ ಕ್ಯಾಮೆರಾ ಪರಿಶೀಲಿಸಲಾಗುತ್ತಿದೆ. ಯುವತಿ ಪತ್ತೆಯಾದರೆ ಹೇಳಿಕೆ ಪಡೆದು ನಾವೇ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಸಿಕೊಳ್ಳುತ್ತೇವೆ. ಆ ಯುವತಿ ಇನ್ನೂ ಪತ್ತೆಯಾಗಿಲ್ಲ. ಘಟನೆ ನಡೆದಿರುವ ಕುರಿತು ಸ್ಪಷ್ಟವಾಗಿಲ್ಲ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.