ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳು ಹಾಗೂ ಖಾಸಗಿ ಬ್ಯಾಂಕ್‌ಗಳು ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳ ರಾಜ್ಯ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಸಮಿತಿಯ ಬೆಂಗಳೂರು ಜಿಲ್ಲಾ ಘಟಕವು ಮನವಿ ಸಲ್ಲಿಸಿ, ಕನ್ನಡದ ಬಳಕೆಯನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದೆ.
‘ಬ್ಯಾಂಕ್ ಸಿಬ್ಬಂದಿಯ ನೇಮಕಾತಿಯಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಹಿಂದಿ ಹಾಗೂ ಇಂಗ್ಲಿಷ್ ಹೇರಿಕೆಯು ಕನ್ನಡಿಗರ ಉದ್ಯೋಗವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆ. ಈ ವಾರ ಇನ್ನಷ್ಟು ಬ್ಯಾಂಕ್‌ಗಳ ಶಾಖೆಗಳಿಗೆ ಭೇಟಿ ನೀಡಿ, ಕನ್ನಡ ಅನುಷ್ಠಾನಕ್ಕೆ ಆಗ್ರಹಿಸಲಾಗುವುದು. ಬ್ಯಾಂಕ್‌ಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ಸಮಿತಿಯ ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರೋಗ್ಯಸ್ವಾಮಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.