ADVERTISEMENT

ನವೆಂಬರ್‌ 13 – 16: ಜಿಕೆವಿಕೆ ಆವರಣದಲ್ಲಿ ಇಂದಿನಿಂದ ಕೃಷಿ ಮೇಳ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 23:35 IST
Last Updated 12 ನವೆಂಬರ್ 2025, 23:35 IST
<div class="paragraphs"><p>ಸಂಗ್ರಹ ಚಿತ್ರ</p></div>

ಸಂಗ್ರಹ ಚಿತ್ರ

   

ಬೆಂಗಳೂರು: ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನವೆಂಬರ್‌ 13ರಿಂದ 16ರವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳ ನಡೆಯಲಿದೆ.

ನ. 13ರಂದು ಬೆಳಿಗ್ಗೆ 11ಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ಉದ್ಘಾಟನೆ ಮಾಡಲಿದ್ದು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ, ಶಾಸಕ ಶರತ್ ಬಚ್ಚೇಗೌಡ ಪಾಲ್ಗೊಳ್ಳಲಿದ್ದಾರೆ. 

ADVERTISEMENT

ಮೇಳದಲ್ಲಿ 700ಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. ಕೃಷಿಕರ ಅನುಕೂಲಕ್ಕಾಗಿ ಜಿಕೆವಿಕೆ ಮುಖ್ಯ ದ್ವಾರದಿಂದ ಕೃಷಿ ಮೇಳದ ಸಭಾಂಗಣಕ್ಕೆ ತಲುಪಲು ಉಚಿತ ಸಾರಿಗೆ ವ್ಯವಸ್ಥೆ, ಪ್ರತ್ಯೇಕ ವಾಹನ ನಿಲುಗಡೆ ಮತ್ತು ರಿಯಾಯಿತಿ ದರದಲ್ಲಿ ಮುದ್ದೆ ಊಟದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವಿಶ್ವವಿದ್ಯಾಲಯದ ಪ್ರಕಟಣೆಯು ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.