ADVERTISEMENT

ಜಿಕೆವಿಕೆ ಸೆಕ್ಯೂರಿಟಿ ಗಾರ್ಡ್ ಹತ್ಯೆ ಮಾಡಿದ್ದವರ ಬಂಧನ: ಬಂಧಿತರು ಅಪ್ರಾಪ್ತರು!

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 2:09 IST
Last Updated 25 ನವೆಂಬರ್ 2021, 2:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಕೃಷಿ ವಿಶ್ವವಿದ್ಯಾಲಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಭದ್ರತಾ ಸಿಬ್ಬಂದಿ ದೀಪಕ್‌ಕುಮಾರ್ (46) ಎಂಬುವರನ್ನು ಅವರ ಮನೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರನ್ನು ಯಲಹಂಕ ನ್ಯೂ ಟೌನ್‌ ಪೊಲೀಸರು ಬಂಧಿಸಿದ್ದಾರೆ.

‘ಬಿಹಾರದ ದೀಪಕ್‌ಕುಮಾರ್‌, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜತೆ ವೀರ್‌ಸಾಗರ್‌ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಹೋದ ಭಾನುವಾರ ತಡರಾತ್ರಿ ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು, ದೀಪಕ್‌ ಮೇಲೆ ದಾಳಿ ಮಾಡಿದ್ದರು. ಮಕ್ಕಳ ಎದುರೇ ಅವರನ್ನು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದರು.

ADVERTISEMENT

ಬಂಧಿತರೆಲ್ಲಾ ಅ‍ಪ್ರಾಪ್ತರಾಗಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.