ADVERTISEMENT

ಬೆಂಗಳೂರು: ಟರ್ಫ್ ಕ್ಲಬ್ ಕುದುರೆಗಳಿಗೆ ಗ್ಲಾಂಡರ್ಸ್ ರೋಗ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 23:34 IST
Last Updated 17 ಡಿಸೆಂಬರ್ 2025, 23:34 IST
<div class="paragraphs"><p>ಕುದುರೆ&nbsp;</p></div>

ಕುದುರೆ 

   

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ದೃಢಪಟ್ಟಿರುವುದರಿಂದ ಇದನ್ನು ಗ್ಲಾಂಡರ್ಸ್ ಕೇಂದ್ರೀಕೃತ ಪ್ರದೇಶವೆಂದು ಗುರುತಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ.

ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮ 2009 ರ ಕಾಲಂ-6 ರಡಿ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು ಟರ್ಫ್ ಕ್ಲಬ್ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಕತ್ತೆಗಳ ಚಲನವಲನ ಹಾಗೂ ಮನರಂಜನೆ, ಮೆರವಣಿಗೆ ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.