ADVERTISEMENT

‘ಬ್ಯಾಟರಿ ಪುನರ್‌ಬಳಕೆಗೆ ಆದ್ಯತೆ ನೀಡಿ’

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 4:22 IST
Last Updated 4 ಮಾರ್ಚ್ 2021, 4:22 IST

ಬೆಂಗಳೂರು: ಬ್ಯಾಟರಿ ಪುನರ್‌ಬಳಕೆಗೆ ಸಂಬಂಧಿಸಿದ ಜಾಗತಿಕ ಸಮಾವೇಶ ನಗರದ ಹೋಟೆಲ್‌ ಲಲಿತ್‌ ಅಶೋಕ್‌ನಲ್ಲಿ ಬುಧವಾರ ಆರಂಭವಾಯಿತು.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾವಾನ ಬದಲಾವಣೆ ಸಚಿವಾಲಯ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿರುವ ಈ ಸಮಾವೇಶ ಗುರುವಾರವೂ ನಡೆಯಲಿದೆ.

ಪರಿಸರ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್‌ ಕುಮಾರ್‌ ಸಮಾವೇಶವನ್ನು ಉದ್ಘಾಟಿಸಿದರು. ಪರಿಸರ ಸಂರಕ್ಷಣೆ ಮತ್ತು ಆರ್ಥಿಕ ಮಿತವ್ಯಯದ ದೃಷ್ಟಿಯಿಂದ ಬ್ಯಾಟರಿಗಳ ಪುನರ್‌ಬಳಕೆಗೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.

ADVERTISEMENT

ನಗರದ ಊರ್ಧ್ವ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ‘ರಿಕಾಮರ್ಸ್‌’ ವಿಭಾಗದ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಬ್ಯಾಟರಿಗಳ ಪುನರ್‌ಬಳಕೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಪರಿಸರ ಸ್ನೇಹಿ ಕ್ರಮಗಳು, ಅವುಗಳ ನಿರ್ವಹಣೆ, ಸಂಗ್ರಹದ ವ್ಯವಸ್ಥೆ ಮತ್ತು ಪುನರ್‌ಬಳಕೆ ಕ್ರಮಗಳ ಅನುಷ್ಠಾನದ ಕುರಿತು ಚರ್ಚೆ ನಡೆಯಿತು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ವಿಜಯ್‌ಕುಮಾರ್‌ ಗೋಗಿ, ಮಂಡಳಿಯ ಸದಸ್ಯ ಕಾರ್ಯದರ್ಶಿ ಶ್ರೀನಿವಾಸಲು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.