ADVERTISEMENT

ಬೆಂಗಳೂರು | ವೈಭವದ ಹನುಮ ಜಯಂತಿ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2023, 16:10 IST
Last Updated 24 ಡಿಸೆಂಬರ್ 2023, 16:10 IST
ಬೆಂಗಳೂರಿನ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಕೋದಂಡ ರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹರಿ ಹನುಮ ಸೇವಾ ಸಮಿತಿ ಸಹಯೋಗದಲ್ಲಿ ಭಾನುವಾರ ನಡೆದ ಶ್ರೀರಾಮ ಲಕ್ಷದೀಪೋತ್ಸವದಲ್ಲಿ ಹನುಮಾನ್‌ ಬರಹದ ಮುಂದೆ ಮಕ್ಕಳು ದೀಪ ಹಚ್ಚಿದರು. –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌
ಬೆಂಗಳೂರಿನ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಕೋದಂಡ ರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹರಿ ಹನುಮ ಸೇವಾ ಸಮಿತಿ ಸಹಯೋಗದಲ್ಲಿ ಭಾನುವಾರ ನಡೆದ ಶ್ರೀರಾಮ ಲಕ್ಷದೀಪೋತ್ಸವದಲ್ಲಿ ಹನುಮಾನ್‌ ಬರಹದ ಮುಂದೆ ಮಕ್ಕಳು ದೀಪ ಹಚ್ಚಿದರು. –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌   

ಬೆಂಗಳೂರು: ನಗರದ ವಿವಿಧ ಆಂಜನೇಯ ದೇವಸ್ಥಾನಗಳಲ್ಲಿ ಭಾನುವಾರ ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ ಆಚರಿಸಲಾಯಿತು.

ಆಂಜನೇಯನ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ಕುಟುಂಬ ಸಮೇತರಾಗಿ ದೇವಾಲಯಗಳಿಗೆ ಬಂದು ಸ್ವಾಮಿಯ ದರ್ಶನ ಪಡೆದರು. ಹಲವು ದೇವಸ್ಥಾನಗಳಲ್ಲಿ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. 

ನಾಗಸಂದ್ರದ ಎಚ್‌ಎಂಟಿ ಬಡಾವಣೆಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಅರ್ಚಕ ಮಾಧವಾಚಾರ್‌ ನೇತೃತ್ವದಲ್ಲಿ ಫಲ ಪಂಚಾಮೃತ ಅಭಿಷೇಕ, ಅಲಂಕಾರ ಸೇವೆ, ಗಣಪತಿ ನವಗ್ರಹ ಮೃತ್ಯುಂಜಯ ಮತ್ತು ರಾಮತಾರಕ ಹೋಮ, ಮಹಾಪೂರ್ಣಾಹುತಿ, ಅನ್ನಸಂತರ್ಪಣೆ ನಡೆದವು. ರಂಗಗೀತೆ, ಸಂಪೂರ್ಣ ರಾಮಾಯಣ ಹರಿಕತೆಗಳನ್ನು ಆಯೋಜಿಸಲಾಗಿತ್ತು.

ADVERTISEMENT

ಕೆ.ಆರ್‌. ರಸ್ತೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನಾಗಶೆಟ್ಟಿಹಳ್ಳಿ ಮಂಜುನಾಥ ಬಡಾವಣೆಯಲ್ಲಿ ಹನುಮ ಜಯಂತ್ಯುತ್ಸವ, ಭಕ್ತಿಗಾನ ಲಹರಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ನಗರದ ಬಿವಿಕೆ ಅಯ್ಯಂಗಾರ್‌ ರಸ್ತೆಯ ಕೋದಂಡರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ಶ್ರೀರಾಮ ಲಕ್ಷದೀಪೋತ್ಸವ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ಭಾಗವಹಿಸಿದ್ದರು. 

ಮಹಾಲಕ್ಷ್ಮಿ ಲೇಔಟ್‌ನಲ್ಲಿ ಇರುವ ಶ್ರೀಪ್ರಸನ್ನ ವೀರಾಂಜನೇಯ ದೇವಸ್ಥಾನದಲ್ಲಿ ಭಾನುವಾರ ಹನುಮ ಜಯಂತಿ ಭಾರಿ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು.

ದೇವಸ್ಥಾನಗಳಲ್ಲಿ ಅಲ್ಲದೇ ರಸ್ತೆ, ಓಣಿ, ಜಂಕ್ಷನ್‌ಗಳಲ್ಲಿ ಹನುಮನ್‌ ಜಯಂತಿ ಆಚರಿಸಿದರು. ಪೊಂಗಲ್‌, ಮೊಸರನ್ನ, ಪುಳಿಯೊಗರೆ ವಿತರಿಸಿದರು.

ಬೆಂಗಳೂರಿನ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಕೋದಂಡ ರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹರಿ ಹನುಮ ಸೇವಾ ಸಮಿತಿ ಸಹಯೋಗದಲ್ಲಿ ಭಾನುವಾರ ನಡೆದ ಶ್ರೀರಾಮ ಲಕ್ಷದೀಪೋತ್ಸವದಲ್ಲಿ ದೀಪ ಹಚ್ಚಿ ಭಕ್ತಿ ಸಮರ್ಪಿಸಿದ ಭಕ್ತರು –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌
ನಗರದ ಮಹಾಲಕ್ಷ್ಮಿ ಲೇಔಟ್‌ನ  ಶ್ರೀ ಪ್ರಸನ್ನ ವೀರಾಂಜನೇಯ ದೇವಸ್ಥಾನದಲ್ಲಿ ಭಕ್ತರು ದೇವರ ದರ್ಶನ ಪಡೆದರು –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌
ಹನುಮ ಜಯಂತಿ ಪ್ರಯುಕ್ತ ಚಿನ್ನಯ್ಯನ ಪಾಳ್ಯದ ಆಂಜನೇಯ ದೇವಸ್ಥಾನದಲ್ಲಿ ಆಂಜನೇಯ ದೇವರ ಮೂರ್ತಿಯನ್ನು ವಿವಿಧ ಹಣ್ಣುಗಳಿಂದ ಅಲಂಕರಿಸಲಾಯಿತು. ಪ್ರಜಾವಾಣಿ ಚಿತ್ರ/ ಎಸ್‌.ಕೆ. ದಿನೇಶ್‌
ಕೆ.ಆರ್. ರಸ್ತೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಅಭಿಷೇಕ ವೀಳ್ಯದೆಲೆ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು. –ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್
ನಾಗಸಂದ್ರದ ಎಚ್‌ಎಂಟಿ ಬಡಾವಣೆಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.