ADVERTISEMENT

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ: ಬೆಂಗಳೂರಿನ ಥಣಿಸಂದ್ರ ನಿವಾಸಿ ಸಾವು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 23:42 IST
Last Updated 7 ಡಿಸೆಂಬರ್ 2025, 23:42 IST
<div class="paragraphs"><p>ಗೋವಾದ ಅರ್ಪೋರಾ ಗ್ರಾಮದಲ್ಲಿನ ನೈಟ್‌ಕ್ಲಬ್‌ನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ದುರಂತದ ಬಳಿಕ ಕಂಡುಬಂದ ಅವಶೇಷಗಳು&nbsp;</p></div>

ಗೋವಾದ ಅರ್ಪೋರಾ ಗ್ರಾಮದಲ್ಲಿನ ನೈಟ್‌ಕ್ಲಬ್‌ನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ದುರಂತದ ಬಳಿಕ ಕಂಡುಬಂದ ಅವಶೇಷಗಳು 

   

ಪಣಜಿ (ಬೆಂಗಳೂರು ವರದಿ): ನೈಟ್‌ಕ್ಲಬ್‌ ‘ಬರ್ಚ್‌ ಬೈ ರೋಮಿಯೊ ಲೇನ್‌’ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಗರದ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಥಣಿಸಂದ್ರ ನಿವಾಸಿ ಇಶಾಕ್ ಎಂಬವರು ಮೃತಪಟ್ಟಿದ್ದಾರೆ.

ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದ ಇಶಾಖ್‌, ರಾತ್ರಿ ಕ್ಲಬ್‌ಗೆ ಹೋಗಿದ್ದರು. ಈ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಿಲುಕಿ ಸಾವಿಗೀಡಾಗಿದ್ದು, ಉಳಿದ ನಾಲ್ವರು ಪಾರಾಗಿದ್ದಾರೆ. ಇಶಾಕ್‌ ಶವವನ್ನು ಅವರ ತಂದೆ ಎಂ.ಡಿ.ಹುಸೇನ್‌ ಗುರುತಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಹಸ್ತಾಂತರಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.