ಬೆಂಗಳೂರು: ಸ್ನೇಹಿತೆಯ ಮನೆಯಿಂದ ಯುವಕನೊಬ್ಬ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆಲಗದರನಹಳ್ಳಿಯಲ್ಲಿ ವಾಸವಿದ್ದ ಬಿಹಾರ ಮೂಲದ ಸೋನುಕುಮಾರ್ ಕೃತ್ಯವೆಸಗಿ ಪರಾರಿಯಾಗಿದ್ದಾನೆ.
‘ಸ್ನೇಹಿತ ಸೋನುಕುಮಾರ್ ನನ್ನ ಮನೆಯಿಂದ 90 ಗ್ರಾಂ ತೂಕದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿದ್ದಾನೆ. ಆತನನ್ನು ಹುಡುಕಿ, ಆಭರಣ ವಾಪಸ್ ಕೊಡಿಸಬೇಕು’ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.