ADVERTISEMENT

ಒಳ ಉಡುಪಿನಲ್ಲಿದ್ದ ಚಿನ್ನ ಜಪ್ತಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 14:37 IST
Last Updated 17 ಏಪ್ರಿಲ್ 2021, 14:37 IST

ಬೆಂಗಳೂರು: ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಚಿನ್ನವನ್ನು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

‘ದುಬೈನಿಂದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಬಂದಿಳಿದಿದ್ದರು. ತಪಾಸಣೆ ವೇಳೆ ಅವರ ಬಳಿ ಚಿನ್ನವಿರುವುದು ತಿಳಿಯಿತು. ಆರಂಭದಲ್ಲಿ ಚಿನ್ನ ಎಲ್ಲಿದೆ ಎಂಬುದು ಗೊತ್ತಾಗಲಿಲ್ಲ. ಒಳ ಉಡುಪು ಪರಿಶೀಲಿಸಿದಾಗ ₹ 16.86 ಲಕ್ಷ ಮೌಲ್ಯದ ಚಿನ್ನದ ಸರ ಹಾಗೂ ಐ–ಫೋನ್ ಸಿಕ್ಕಿತು’ ಎಂದು ಕಸ್ಟಮ್ಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT