ADVERTISEMENT

₹ 52.89 ಲಕ್ಷ ಮೌಲ್ಯದ ಚಿನ್ನ ಜಪ್ತಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2020, 17:21 IST
Last Updated 31 ಡಿಸೆಂಬರ್ 2020, 17:21 IST
ಜಪ್ತಿ ಮಾಡಲಾದ ಚಿನ್ನದ ಗಟ್ಟಿ
ಜಪ್ತಿ ಮಾಡಲಾದ ಚಿನ್ನದ ಗಟ್ಟಿ   

ಬೆಂಗಳೂರು: ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ ವಿಮಾನ ಪ್ರಯಾಣಿಕರೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರಿಂದ ₹ 52.89 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ.

‘ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಬಳಿ ಚಿನ್ನದ ಗಟ್ಟಿ ಸಿಕ್ಕಿತು. ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಕಸ್ಟಮ್ಸ್ ಮೂಲಗಳು ತಿಳಿಸಿವೆ.

‘ದುಬೈನಿಂದ ಬಂದಿದ್ದ ಪ್ರಯಾಣಿಕರೊಬ್ಬರನ್ನು ನಿಲ್ದಾಣದಿಂದ ಹೊರಬರುತ್ತಿದ್ದ ವೇಳೆ ತಪಾಸಣೆ ನಡೆಸಲಾಯಿತು. ಲಗೇಜು ಬ್ಯಾಗ್‌ನಲ್ಲಿದ್ದ ಕವರ್‌ನಲ್ಲಿ ಚಿನ್ನದ ಗಟ್ಟಿ ಇತ್ತು’ ಎಂದೂ ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.