ಬೆಂಗಳೂರು: ಮನೆಯಲ್ಲಿ ಕನ್ನತನ ಹಾಗೂ ದ್ವಿಚಕ್ರ ವಾಹನಗಳ ಕನ್ನ ಮಾಡಿದ್ದ ಇಬ್ಬರು ಆರೋಪಿಗಳನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ, 390 ಗ್ರಾಂ ಚಿನ್ನದ ಗಟ್ಟಿ, ಎರಡು ವಾಹನ ವಶಪಡಿಸಿಕೊಂಡಿದ್ದಾರೆ.
ಮಿಥುನ್ ಅಲಿಯಾಸ್ ಮಿಲ್ಕಿ ಹಾಗೂ ಸತೀಶ್ ಅಲಿಯಾಸ್ ಬುಡ್ಡ ಬಂಧಿತ ಆರೋಪಿಗಳು.
ಆರ್.ಆರ್.ನಗರದ ನಿವಾಸಿಯೊಬ್ಬರು ಜಯನಗರದ 8ನೇ ಬ್ಲಾಕ್‌ನ ಸಂಗಮ್ ಸರ್ಕಲ್‌ನಲ್ಲಿ ಸ್ವೀಟ್ ಅಂಗಡಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕಿ, ಬಸವನಗುಡಿಯಲ್ಲಿರುವ ಗಾಂಧಿ ಬಜಾರ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಮೇತ ಇಬ್ಬರನ್ನು ಬಂಧಿಸಿದರು.
ದ್ವಿಚಕ್ರ ವಾಹನ ಕಳವು ಮಾಡಿದಲ್ಲದೇ, ಠಾಣಾ ವ್ಯಾಪ್ತಿಯಲ್ಲಿ ಮತ್ತಿಬ್ಬರ ಸಹಚರರೊಂದಿಗೆ ಸೇರಿಕೊಂಡು ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಯಿತು. ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಕತ್ರಿಗುಪ್ಪೆಯಲ್ಲಿರುವ ಆಭರಣ ಅಂಗಡಿಯಲ್ಲಿ ಮಾರಾಟ ಮಾಡಿದ್ದ390 ಗ್ರಾಂ ಚಿನ್ನದ ಗಟ್ಟಿಯನ್ನು ವಶಪಡಿಸಿಕೊಳ್ಳಲಾಯಿತು ಎಂದು ಪೊಲೀಸರು ತಿಳಿಸಿದರು.
ಕದ್ದ ಬೈಕ್‌ನಲ್ಲಿ ಆರೋಪಿಗಳು ಬಡಾವಣೆಗಳಲ್ಲಿ ಸುತ್ತಾಡಿ ಮನೆಗಳನ್ನು ಗುರುತಿಸಿ, ಕಳ್ಳತನದ ಸಂಚು ರೂಪಿಸಿದ್ದರು. ಚಿನ್ನಾಭರಣ ಕದ್ದು, ಅದನ್ನು ಕರಗಿಸಿ ಚಿನ್ನದ ಗಟ್ಟಿ ಮಾಡಿಸಿ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ ಎರಡು ಬೈಕ್, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಮಿಥುನ್ ವಿರುದ್ಧ 9 ಹಾಗೂ ಸತೀಶ್ ವಿರುದ್ಧ 7 ಪ್ರಕರಣಗಳು ದಾಖಲಾಗಿವೆ. ಇಬ್ಬರ ಬಂಧನದಿಂದ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.